ವಾಣಿಜ್ಯ ಸುದ್ದಿ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಲ್ಪ ಇಳಿಕೆ

ನವದೆಹಲಿ: ಕಚ್ಚಾತೈಲ ಬೆಲೆ ಇಳಿಕೆಯ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಜೊತೆಗೆ ಗ್ರಾಹಕರ ಸಮಾಧಾನಕ್ಕಾಗಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಅಲ್ಪ ಪ್ರಮಾಣದಲ್ಲಿ ಇಳಿಕೆ ಮಾಡಿದೆ.
ಇಂಡಿಯನ್ ಆಯಿಲ್ ಕಾರ್ಪೆರೇಷನ್ ನೀಡಿರುವ ಮಾಹಿತಿ ಪ್ರಕಾರ, ಪ್ರತಿ ಲೀಟರ್ ಪೆಟ್ರೋಲ್ ದರ 4 ಪೈಸೆ ಹಾಗೂ ಡೀಸೆಲ್ ದರ 3 ಪೈಸೆ ಇಳಿಕೆ ಮಾಡಲಾಗಿದ್ದು, ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬರಲಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯನ್ನು ಗಮನಿಸಿದರೆ ಕನಿಷ್ಠ ಪ್ರತಿ ಲೀಟರ್ ಪೆಟ್ರೋಲ್ 1.04 ರುಪಾಯಿ ಹಾಗೂ ಡೀಸೆಲ್ ದರ 1.53 ರುಪಾಯಿ ಇಳಿಕೆಯಾಗಬೇಕಿತ್ತು. ಆದರೆ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಗೆ 1 ರುಪಾಯಿ ಹಾಗೂ ಡೀಸೆಲ್ 1.50 ರುಪಾಯಿ ಅಬಕಾರಿ ಸುಂಕ ಹೆಚ್ಚಳ ಮಾಡಿತ್ತು.