ಜಾಬ್ ಜಂಕ್ಷನ್

ಆರ್‌ಟಿಒದಲ್ಲಿ ಕೆಲಸ ಖಾಲಿ ಇದೆ

ಕರ್ನಾಟಕ ಲೋಕಸೇವಾ ಆಯೋಗವು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಮತ್ತು ಗ್ರೂಪ್ ಸಿ ವೃಂದದ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳ ವರ್ಗೀಕರಣ
ಪ್ರಾದೇಶಿಕ ಸಾರಿಗೆ ಅಧಿಕಾರಿ (ಗ್ರೂಪ್ ಎ): ಒಟ್ಟು ಇರುವ 11 ಹುದ್ದೆಗಳಲ್ಲಿ ಹೈ-ಕ ವಿಭಾಗಕ್ಕೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ.
ವಿದ್ಯಾರ್ಹತೆ: ಮೆಕ್ಯಾನಿಕಲ್ ಅಥವಾ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.
ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ಸಿ): ಒಟ್ಟು 150 ಹುದ್ದೆಗಳಲ್ಲಿ 23 ಹುದ್ದೆಗಳನ್ನು ಹೈ-ಕ ವಿಭಾಗಕ್ಕೆ ಮೀಸಲಾಗಿವೆ.
ವಿದ್ಯಾರ್ಹತೆ: ಮೆಕ್ಯಾನಿಕಲ್ ಅಥವಾ ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷದ ಡಿಪ್ಲೊಮಾ ವ್ಯಾಸಂಗ ಪೂರ್ಣಗೊಳಿಸಿರಬೇಕು ಜೊತೆಗೆ ಒಂದು ವರ್ಷದ ಸೇವಾನುಭವ. ಲಘು ಮತ್ತು ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರುವುದು ಕಡ್ಡಾಯ.
ದೈಹಿಕ ಮಾನದಂಡ: ಪುರುಷ ಅಭ್ಯರ್ಥಿಗಳಾಗಿದ್ದಲ್ಲಿ ಎತ್ತರ: 168 ಸೆಂ.ಮೀ; ಎದೆ ಸುತ್ತಳತೆ: 60 ಸೆಂ.ಮೀ ಮತ್ತು ಮಹಿಳಾ ಅಭ್ಯರ್ಥಿಳಾಗಿದ್ದಲ್ಲಿ ಎತ್ತರ: 157 ಸೆಂ.ಮೀ.; ತೂಕ: 49 ಕೆ.ಜಿ.
ವಯೋಮಿತಿ: ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35  ವರ್ಷ ನಿಗದಿಪಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 38 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3೦೦ ರೂ. ಮತ್ತು ಎಸ್‌ಸಿ/ ಎಸ್‌ಟಿ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 25 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ನೇಮಕ ಹೇಗೆ?
ಪ್ರಾದೇಶಿಕ ಸಾರಿಗೆ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಹಾಗೂ ಮೋಟಾರು ವಾಹನ ನಿರೀಕ್ಷಕರ ಹುದ್ದೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್-ಒಎಂಆರ್ ಮಾದರಿ (Offline-OMR type)ಅಥವಾ ಗಣಕ ಯಂತ್ರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ Computer based competitive exam-CBCE)
ಮೂಲಕ ನಡೆಸಲಾಗುತ್ತದೆ. CBCE) ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದರೆ ಆಯೋಗ ಈ ಸಂಬಂಧ ಸೂಚನೆಯನ್ನು ವೆಬ್‌ನಲ್ಲೇ ಪ್ರಕಟಿಸುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಬರೆಯಲು ಅವಕಾಶ ಇದೆ.

ಜಸ್ಟ್ ಸೈಡ್‌ಲೈಟ್

ಒಟ್ಟು ಹುದ್ದೆಗಳು: 161

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2016ರ ಮಾರ್ಚ್ 04

ಶುಲ್ಕ ಪಾವತಿಸಲು ಕೊನೆಯ ದಿನ: 2016ರ ಮಾರ್ಚ್ 05

ಸಹಾಯವಾಣಿ: 7337812816/ 9538791579

ಹೆಚ್ಚಿನ ಮಾಹಿತಿಗಳನ್ನು ಪಡೆಯಲು:
www.kpsc.kar.nic.in
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು:
ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ :080-30574957
080-30574901

ಪ್ರಾಂತೀಯ ಕಛೇರಿ ಮೈಸೂರು : 0821-2545956;
ಬೆಳಗಾವಿ : 0831-2475345; ಗುಲ್ಬರ್ಗಾ :
08472-227944  ಮತ್ತು ಶಿವಮೆಗ್ಗ : 08182-228099