ದೊಡ್ಡ ಸುದ್ದಿ ಸಿಟಿ ಸುದ್ದಿ

ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಮೂರು ಕಾರಣಗಳು!

ಮಂಗಳೂರು: ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷ ಸೋತು ಸುಣ್ಣಾಗಿರೋದು ಬಟಾ ಬಯಲಾಗಿದೆ. ಈ ಮೂಲಕ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷ ಸೋಲು ಕಾರಣವಾದ ಮೂರು ಅಂಶಗಳು ಯಾವುವು ಎಂದು ಪಕ್ಷದ ಮುಖಂಡರು ಮೀಟಿಂಗ್ ಕರೆದು ಅಲೋಚನೆ ಮಾಡುತ್ತಿದ್ದಾರೆ ಎನ್ನುವ ಸುದ್ದಿಯೊಂದು ಬಂದಿದೆ.
ಕರಾವಳಿಯಲ್ಲಿ ಮುಖ್ಯವಾಗಿ ದಕ್ಷಿಣ ನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಮತಗಳು ನೇತ್ರಾವತಿಯ ಎತ್ತಿನ ಹೊಳೆ ಯೋಜನೆಯಿಂದ ಕಾಂಗ್ರೆಸ್‌ಗೆ ತಪ್ಪಿ ಹೋಯಿತು. ಉಡುಪಿಯಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿತನಾದ ಜಯಪ್ರಕಾಶ್ ಹೆಗ್ಡೆ ಅವರ ಬೆಂಬಲಿಗರು ಪರೋಕ್ಷವಾಗಿ ಬಿಜೆಪಿಗೆ ಮತ ನೀಡಿ ಎಂದುಬಿಟ್ಟರು. ಕುಂದಾಪುರದಲ್ಲಿ ಪಕ್ಷೇತರ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದರು. ಈ ಮೂರೇ ಕಾರಣಗಳು ಕಾಂಗ್ರೆಸ್ ಸೋಲಿಗೆ ಕಾರಣವಾಯಿತು ಎನ್ನಲಾಗುತ್ತಿದೆ.